Breaking News

ಸಿದ್ದರಾಮಯ್ಯನ್ನು  ಕೋಲಾರಕ್ಕೆ ಕರೆದು ಕಾಂಗ್ರೆಸ್‌ ಮುಖಂಡರು ಬಲಿ ಕೊಡಲು ಮುಂದಾಗಿದ್ದಾರೆ : ಡಾ.ಕೆ.ಸುಧಾಕರ್‌


ತುಮಕೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆದುಕೊಂಡು ಬಂದು ಅಲ್ಲಿನ ಕಾಂಗ್ರೆಸ್‌ ಮುಖಂಡರು ಬಲಿ ಕೊಡಲು ಮುಂದಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಲೇವಡಿ ಮಾಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಾಕಷ್ಟು ಕಾಂಗ್ರೆಸ್‌ ನಾಯಕರು ಇದ್ದರೂ ಸಹ ಬುಡ ಅಲಗಾಡುತ್ತಿರವ ಹಿನ್ನೆಲೆಯಲ್ಲಿ ಅದನ್ನು ಸರಿ ಮಾಡಲು ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದ್ದಿದಾರೆ.

ನಗರದಲ್ಲಿ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವು ಪ್ರಕರಣದಲ್ಲಿ ಏಕಪಕ್ಷೀಯ ಕ್ರಮವಾಗಿದೆ ಎಂಬ ಆರೋಪಿ ವೈದ್ಯೆಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಏಕಮುಖ ತನಿಖೆ ನಡೆಯುತ್ತಿದೆ ಎಂಬ ಆರೋಪ ಸರಿಯಲ್ಲ. ನಾನು ಸಿಸಿ ಕ್ಯಾಮೆರಾ ನೋಡಿದ್ದೇನೆ. ಏಕಮುಖವಾಗಿ ನಿರ್ಧಾರ ತೆಗೆದುಕೊಂಡಿಲ್ಲ. ಅವರು ಆಪರೇಷನ್‌ ಥಿಯೇಟರ್‌ನಿಂದ ಬಂದಿದ್ದಾರೆ. ಆ ವಿಡಿಯೋ ಫ್ರೇಮ್‌ನಲ್ಲಿ ರೋಗಿ ಹಾಗೂ ವೈದ್ಯೆ ಇಬ್ಬರೂ ಇದ್ದಾರೆ ಎಂದರು.

ತಾಯಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣದ ನತದೃಷ್ಟ ಬಾಲಕಿಯ ಶಿಕ್ಷಣ, ಭದ್ರತೆ ಹಾಗೂ ಭವಿಷ್ಯಕ್ಕಾಗಿ 10 ಲಕ್ಷ ರು.ಗಳ ಚೆಕ್ಕನ್ನು ಆರೋಗ್ಯ ಇಲಾಖೆ ಪರವಾಗಿ ವಿತರಿಸಿದ್ದು, ಹಣವನ್ನು ನಿಶ್ಚಿತ ಠೇವಣಿ ಇಡಲಾಗುವುದು. ತಾಯಿ ಮತ್ತು ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರುಗಳ ಕರ್ತವ್ಯ ಲೋಪ ಕುರಿತು ಆರೋಗ್ಯ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *