Breaking News

ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ : ಕಾಗೇರಿ

ಧಾರವಾಡ: ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಕ್ಯಾಬಿನೆಟ್ ಎಷ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸುತ್ತದೆಯೋ ಅಷ್ಟು ದಿನ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಈ ಬಾರಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಒಳ್ಳೆಯ ರೀತಿಯಲ್ಲಿ ಅಧಿವೇಶನ ನಡೆಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ನಿರ್ಧರಿಸಿ ಹೇಳಬೇಕಿದೆ. ಅದಕ್ಕಾಗಿ ನಾವೂ ಕಾಯುತ್ತಿದ್ದೇವೆ ಎಂದರು.ಅಧಿವೇಶನಕ್ಕೆ 10 ದಿನ ಸಾಕಾಗುವುದಿಲ್ಲ. ಚರ್ಚೆಗೆ ಸಮಯ ಸಾಕಾಗಲಾರದು ಎಂಬ ಸಲಹೆಗೆ ಪ್ರತಿಕ್ರಿಯಿಸುತ್ತಾ, ಸಂಪುಟದಲ್ಲಿ ಏನು ನಿರ್ಧಾರವಾಗುತ್ತದೋ ಅದರಂತೆ ಮಾಡುತ್ತೇವೆ ಎಂದು ಹೇಳಿದರು.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *