Breaking News

ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ


ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರಕಡಿಮೆಯಾಗಿದೆ. ಆದರೆ, ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಈ ವಾರದಲ್ಲಿ ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದಲೇ ಚಳಿಯ ವಾತಾವರಣವಿದ್ದು, ಇಂದು ಕೂಡ ಮಂಜು ಮುಸುಕಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ಹವಾಮಾನ ವರದಿ ಪ್ರಕಾರ, ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಹಾಗೂ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಇಂದು ಈ ಪ್ರಮಾಣ ಮತ್ತಷ್ಟು ಕಡಿಮೆಯಾಗಿ, 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡು ಬರಲಿದೆ. ಶನಿವಾರ ವಾತಾವರಣ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಸಾಮಾನ್ಯವಾಗಿ ಹಿಂಗಾರು ಮಳೆಯ ಕಾಲದಲ್ಲಿ ಕಡಿಮೆ ಚಳಿ ಹಾಗೂ ಸ್ವಲ್ಪ ಪ್ರಮಾಣದಲ್ಲಿ ಮಬ್ಬು ವಾತಾವರಣ ಇರುತ್ತದೆ. ಡಿಸೆಂಬರ್ ಮಧ್ಯಭಾಗದಿಂದ ಸುಮಾರು 2 ತಿಂಗಳು ಅತ್ಯಧಿಕ ಚಳಿ, ಮಂಜು ಕಂಡು ಬರಲಿದೆ. ಆದರೆ, ಈ ಬಾರಿ ಹವಾಮಾನ ವೈಪರೀತ್ಯಗಳಿಂದಾಗಿ ಮಳೆಯ ಜೊತೆ ಜೊತೆಗೆ ಚಳಿ ಕೂಡ ಆವರಿಸಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *