ಥಾಣೆ: ಭಾರತ್ ಜೋಡೋ ಯಾತ್ರೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಅವರು ದೂರು ದಾಖಲಿಸಿದ್ದಾರೆ.
ರಾಹುಲ್ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 500, 501 ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (ಎನ್‌ಸಿಆರ್) ಅಪರಾಧದ ಪ್ರಕರಣವನ್ನು ಗುರುವಾರ ದಾಖಲಿಸಲಾಗಿದೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಗೆ ಕ್ಷಮೆಯಾಚಿಸುವ ಪತ್ರಕ್ಕೆ ಸಹಿ ಹಾಕುವ ಮೂಲಕ ಸಾವರ್ಕರ್ ಅವರು ಎಂಕೆ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.
ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ಮಾನಹಾನಿ ಮಾಡುವ ಹೇಳಿಕೆ ನೀಡಿದ್ದರು ಮತ್ತು ಇದರಿಂದಾಗಿ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ. ಮಹಾರಾಷ್ಟ್ರದ ನೆಲದಲ್ಲಿ ನಮ್ಮ ಮಹಾಪುರುಷರ ವಿರುದ್ಧ ಮಾತನಾಡುವುದನ್ನು ನಾವು ಸಹಿಸುವುದಿಲ್ಲ ಎಂದು ಡೋಂಗ್ರೆ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

