Breaking News

ರವಿರಾಜ ಕೊರವಿ ಮತ್ತೆ ಬಿಜೆಪಿಗೆ ಸೇರ್ಪಡೆ


ಚಿಂಚೋಳಿ (ಕಲಬುರಗಿ ಜಿಲ್ಲೆ): ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ.

ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.

2016ರಲ್ಲಿ ನಡೆದ ಜಿ.ಪಂ ಚುನಾವಣೆಯಲ್ಲಿ ಕೋಡ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಲಿಂಗಾರೆಡ್ಡಿ ದೇಶಮುಖ ಎದುರು ಪರಾಭವಗೊಂಡಿದ್ದರು. ಇದಕ್ಕೂ ಮೊದಲು 2011ರಲ್ಲಿ ನಡೆದ ಚುನಾವಣೆಯಲ್ಲಿ ರವಿರಾಜ ಪತ್ನಿ ಸುನಂದಾ ಕೊರವಿ ಚಿಮ್ಮನಚೋಡ ಜಿ.ಪಂ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2016ರಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅಳಿಯ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *