Breaking News

ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಮಂದಾಗಬೇಕು : ರಣರಾಗಿಣಿ ಘಟಕದ ಸದಸ್ಯರು

ಹುಬ್ಬಳ್ಳಿ: ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಘಟಕದ ಸದಸ್ಯರು ಒತ್ತಾಯಿಸಿದ್ದಾರೆ.

ನಗರದ ಮಿನಿವಿಧಾನ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಈ ಕುರಿತು ಸರ್ಕಾರ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು.

ಮುಂಬೈ ಮೂಲದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ 35 ತುಂಡುಗಳಾಗಿ ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದು, ಅದರ ಹಿಂದೆ ಲವ್ ಜಿಹಾದ್ ಇರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಮಾಸುವ ಮುನ್ನವೇ ರಾಯಚೂರಿನಲ್ಲಿ ಹಿಂದೂ ಯುವತಿಯನ್ನು ಲವ್ ಜಿಹಾದ್’ಗೆ ಒಳಪಡಿಸಿದ ಪ್ರಕರಣ ಪತ್ತೆಯಾಗಿದೆ. ಉತ್ತರ ಪ್ರದೇಶ ಲಕ್ನೋದಲ್ಲಿಯೂ ಇಂತಹದ್ದೇ ಪ್ತಕರಣಗಳು ನಡೆಯುತ್ತಿವೆ. ಲವ್ ಜಿಹಾದ್ ತಡೆಯಲು ಕಠಿಣವಾದ ‘ಲವ್ ಜಿಹಾದ್ ಕಾಯ್ದೆ’ ಜಾರಿಗೆ ತರಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಘಟಕದ ಸಂಯೋಜಕಿ ಕವಿತಾ, ರೂಪಾ ದವಳಗಿ, ವಿದುಲಾ ಹಳದಿಪುರ, ಗೀತಾಂಜಲಿ, ಸುಧಾ ಇದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *