ಧಾರವಾಡ: ಕೃಷಿ ಸಾಲಕ್ಕೆ ಹೆದರಿದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಯರಿಹಕ್ಕಲ ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ಬ್ಯಾಂಕ್ ಆಫ್ ಬರೋಡಾದಲ್ಲಿ ಕೃಷಿ ಸಾಲ ಸೇರಿದಂತೆ ಬೇರೆಯವರ ಬಳಿಯೂ ಕೈಗಡ ಸಾಲ ಮಾಡಿದ್ದ. ಎರಡು ಎಕರೆ ಜಮೀನು ಹೊಂದಿರುವ ಇತ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

