ಧಾರವಾಡ: ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯನ್ನು ಧಾರವಾಡದಲ್ಲಿ ವಿಶಿಷ್ಠವಾಗಿ ಆಚರಣೆ ಮಾಡಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಜಾರಿಗೆ ತಂದ ಇಂದಿರಾ ಕ್ಯಾಂಟಿನ್ನಲ್ಲೇ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ನೇತೃತ್ವದಲ್ಲಿ ಇತರ ಕಾಂಗ್ರೆಸ್ ಕಾರ್ಯಕರ್ತರು ದಿವಂಗತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ. ಇಂದಿರಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು.
ನಂತರ ಕಾಂಗ್ರೆಸ್ ಮುಖಂಡರು ಇಂದಿರಾ ಕ್ಯಾಂಟಿನ್ನಲ್ಲೇ ಉಪಹಾರ ಸೇವಿಸಿ, ಇಂದಿರಾ ಕ್ಯಾಂಟಿನ್ ಮಹತ್ವವನ್ನು ಸಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

