Breaking News

ಸಂಸದರ ಆರೋಗ್ಯ ವಿಚಾರಿಸಿದ ಸಿಎಂ


ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರೆ ಗಣ್ಯರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *