Breaking News

ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆ : ಕಾಗೇರಿ


ಬೆಂಗಳೂರು: ಸಹಕಾರ ಸಂಘಗಳ ರೂ1 ಲಕ್ಷ ವರಗಿನ ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ನಿ,ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾ ಮಂಡಳಿ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಎಲ್ಲಾ ರೀತಿಯ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿ ಇವರುಗಳು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ’ 69 ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಎರಡನೇ ಅಲೆಯಲ್ಲಿ 6.17 ಲಕ್ಷ ರೈತರಿಗೆ ಮತ್ತು 0.66 ಲಕ್ಷ ಸ್ವಸಹಾಯ ಗುಂಪುಗಳಿಗೆ 2021 ಮಾರ್ಚ್ ನಿಂದ ಡಿಸೆಂಬರ್ ವರೆಗೆ ಮರುಪಾವತಿಗೆ ಬರುವ ಕಂತು ಮುಂದೂಡಿ ಇದರ 102 ಕೋಟಿ ಬಡ್ಡಿ ಯನ್ನು ಪತ್ತಿನ ಸಹಕಾರ ಸಂಸ್ಥೆಗಳಿಗೆ ಭರಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ನವೆಂಬರ್ 14 ರಿಂದ ಮರುಜಾರಿಗೊಳಿಸಲಾಗಿದೆ. ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಇದೇ ವೇಳೆ 54 ಜನರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಶಸ್ವಿನಿ ಕಾರ್ಡ್ ಹಾಗೂ ಸಹಕಾರ ವಾರ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಶಾಸಕರಾದ ಜಿ.ಟಿ.ದೇವೇಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ಅಧ್ಯಕ್ಷರಾದ ಜಿ.ಪಿ. ಪಾಟೀಲ್, ಕರ್ನಾಟಕ ರಾಜ್ಯ ಸಹಕಾರಿ ಮತ್ತು ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣಕುಮಾರ್.ಡಿ, ರಾಜ್ಯ ಮಹಿಳಾ ಸಹಕಾರ ಮಹಾ ಮಂಡಲದ ಅಧ್ಯಕ್ಷೆ ಶಕುಂತಲಾ.ಕೆ.ಬೆಲ್ದಾಳೆ, ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಲ ಅಧ್ಯಕ್ಷರಾದ ಡಾ.ಬಿ.ಡಿ.ಭೂಕಾಂತ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *