Breaking News

ಇಂದು ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ

ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಬಳ್ಳಾರಿಯಲ್ಲಿ ಇಂದು ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಹಮ್ಮಿಕೊಂಡಿದೆ.

ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಬಳ್ಳಾರಿ ಸಮೀಪದ ಜಿ ಸ್ಕ್ವಾಯರ್ ಲೇಔಟ್ ಬಳಿ ಸಮಾವೇಶ ಆಯೋಜಿಸಲಾಗಿದ್ದು, 4 ಲಕ್ಷಕ್ಕೂ ಅಧಿಕ ಮಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಸಮಾವೇಶದ ನಿರ್ವಹಣೆಗಾಗಿ 3000ಕ್ಕೂ ಅಧಿಕ ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದ್ದು, 380 ಕೌಂಟರ್ ಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಸುಮಾರು 20 ಕಡೆ ಪಾರ್ಕಿಂಗ್ ಗೆ 500 ಎಕರೆ ಜಾಗ ಮೀಸಲಿಡಲಾಗಿದೆ.

ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಸುಮಾರು 100 ಎಕರೆ ಜಾಗದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಅದ್ದೂರಿಯಾಗಿ ಎಸ್.ಟಿ. ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *