Breaking News

ಮತದಾರರ ಪಟ್ಟಿಯಲ್ಲಿ ಗೋಲ ಮಾಲ್ : ಕೇಂದ್ರ ಬಿಜೆಪಿ ಹೈ ಕಮಾಂಡ್ ಆಕ್ರೋಶ



ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮ ಕುರಿತು ವರದಿ ನೀಡಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ.

ಗುಜರಾತ್ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲು ಕೆಲವೇ ದಿನಗಳು ಬಾಕಿ ಇರುವಾಗ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಅಮ್ ಆದ್ಮಿ ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಮೇಲೆ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ದೆಹಲಿ ನಾಯಕರು ವರದಿ ನೀಡಲು ಸೂಚಿಸಿದ್ದಾರೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರಿಗೆ ಪ್ರಕರಣದ ಕುರಿತು ಪ್ರತ್ಯೇಕವಾಗಿ ವರದಿ ನೀಡಬೇಕೆಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣವು ರಾಷ್ಟ್ರ ಮಟ್ಟದಲ್ಲೂ ಪ್ರತಿಧ್ವನಿಸಿರುವುದರಿಂದ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡುವುದಾಗಿ ಹೇಳಿದೆ. ಹೀಗಾಗಿ ಸತ್ಯಸತ್ಯತೆ ಬಗ್ಗೆ ಎರಡು ದಿನದೊಳಗೆ ವರದಿ ನೀಡಬೇಕೆಂದು ಹೈಕಮಾಂಡ್ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ. ಮತದಾರರ ಗುರುತಿನಚೀಟಿ ಪರಿಷ್ಕರಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಅಶ್ವಥ್ ನಾರಾಯಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *