Breaking News

ವಿಧಾನಸಭಾ ಚುನಾವಣೆ : ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ


ಕೊಪ್ಪಳ: 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಅಲ್ಲದೇ ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ತಾಲೂಕಿನ ವನಬಳ್ಳಾರಿಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆನಂತರ ಮಾತನಾಡಿ, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದರು. ಜಿಲ್ಲೆಯಿಂದ ನಮಗೆ ಪೂರ್ಣ ಬೆಂಬಲ ನೀಡಿ, ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *