ತೆಲುಗಿನ ಸ್ಟಾರ್ ನಟ ನಾಗಶೌರ್ಯ ಕನ್ನಡತಿ ಅನುಷಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ನಾಗಶೌರ್ಯ ಹಾಗೂ ಅನುಷಾ ಶೆಟ್ಟಿ ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ.
ಟಾಲಿವುಡ್‌ನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟ ನಾಗಶೌರ್ಯ ಇದೀಗ ಕರ್ನಾಟಕದ ಅಳಿಯ ಆಗಿದ್ದಾರೆ.ಕುಂದಾಪುರದ ಮೂಲದ ಹುಡುಗಿ ಅನುಷಾ, ಬೆಂಗಳೂರಿನಲ್ಲಿ ಇಂಟಿರಿಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು, ತಮ್ಮದೇ ಸಂಸ್ಥೆಯನ್ನ ಕೂಡ ತೆರೆದಿದ್ದಾರೆ. ಇನ್ನೂ ನಾಗಶೌರ್ಯ ಕನ್ನಡದ ಹುಡುಗಿಯನ್ನು ಪ್ರೀತಿಸಿ, ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಆಗಿದ್ದಾರೆ.
ನಾಗ್ ಮತ್ತು ಅನುಷಾ ಶೆಟ್ಟಿ ಮದುವೆ ನವೆಂಬರ್ 20ರಂದು ಬೆಂಗಳೂರಿನ ವಿಟ್ಟಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆದಿದೆ. ನಾಗ್, ಅನುಷಾ ಮದುವೆ 11.25ರ ಶುಭ ಮುಹೂರ್ತದಲ್ಲಿ ನಡೆದಿದೆ. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಕೆಲವೇ ಮಂದಿಗೆ ನಾಗಶೌರ್ಯ ಮದುವೆಗೆ ಸಾಕ್ಷಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

