Breaking News

ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಸಿಎಂ ಸೂಚನೆ



ಬೆಂಗಳೂರು: ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಸೋಮವಾರ ಗೃಹ ಕಚೇರಿ ಕೃಷ್ಣದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ನಿರ್ಮಾಣದ ವಿವಿಧ ಹಂತಗಳಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಇದೊಂದು ಆಂದೋಲನದ ರೀತಿಯಲ್ಲಿ ಕೈಗೊಂಡು ಅಗತ್ಯವಿರುವ ಸಿಬ್ಬಂದಿ ಪೂರೈಸುವುದಾಗಿ ತಿಳಿಸಿದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು” ಎಂದು ಸೂಚಿಸಿದರು.

ಎಲ್ಲಾ ಕೆಡಿಪಿ ಸಭೆಗಳಲ್ಲಿ ವಿವಿಧ ವಸತಿ ಯೋಜನೆಗಳಡಿ ಗೃಹ ನಿರ್ಮಾಣ ಪ್ರಮುಖ ವಿಷಯವಾಗಬೇಕು. ಹಿಂದಿನ ವರ್ಷಗಳ ಮನೆಗಳ ಪೈಕಿ 2 ಲಕ್ಷ ಹೆಚ್ಚಿನ ಮನೆಗಳು ಹಾಗೂ ಪ್ರಸಕ್ತ ಸಾಲಿನ 2 ರಿಂದ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ನಗರ ಪ್ರದೇಶಕ್ಕೆ ಸಂಬಂಧಿಸಿದಂತೆ ಖಾಸಗಿ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು ಸಾಲ ನೀಡುವ ನಿಯಮಗಳ ಬಗ್ಗೆ ಚರ್ಚಿಸಲು ಸೂಚಿಸಿದರು.

20 ಸಾವಿರ ಮನೆ ನಿರ್ಮಾಣ ಮಾಡಲು ಅನುದಾನದ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಒಟ್ಟು 1089 ಕೋಟಿ ಲಭ್ಯವಿದ್ದು, ಫಲಾನುಭವಿಗಳು ನೀಡಬೇಕಿರುವ ಅನುದಾನ ಸರ್ಕಾರವೇ ಸಾಲ ನೀಡಿ, ಫಲಾನುಭವಿಗಳು ಹಣ ಮರುಪಾವತಿ ಮಾಡುವ ಷರತ್ತು ವಿಧಿಸಿ, ಕಂತಿನ ಮೊತ್ತವನ್ನು ಸರ್ಕಾರಕ್ಕೆ ಮರುಪಾವತಿ ಮಾಡುವಂತೆ ಸಿಎಂ ಸೂಚಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *