Breaking News


ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್


ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಆಡಳಿತ ಪಕ್ಷ. ಇಷ್ಟೇ ಅಲ್ಲ ಪಂಚಾಯತ್, ಕಾರ್ಪೋರೇಶ್ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಟಿಎಂಸಿ ಅಧಿಕಾರದಲ್ಲಿದೆ. ಆದರೆ ತೃಣಮೂಲ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ.

ಕೋಲ್ಕತಾ ಹೈಕೋರ್ಟ್ ಆದೇಶದ ಬಳಿಕ ಝಲ್ದಾ ಮುನ್ಸಿಪಾಲಿಟಿಯಲ್ಲಿ ಟಿಎಂಸಿ ಅಧಿಕಾರ ಕಳೆದುಕೊಂಡಿದೆ. ಇದೀಗ ಝಲ್ದಾ ಕಾರ್ಪೋರೇಶನ್ ಕಾಂಗ್ರೆಸ್ ಪಾಲಾಗಿದೆ. ಝಲ್ದಾ ಕಾರ್ಪೋರೇಶನ್ ಉಳಿಸಿಕೊಳ್ಳಲು ತೀವ್ರ ಹೋರಾಟ ನಡೆಸಿದ್ದ ಟಿಎಂಸಿ ಇದೀಗ ತೀವ್ರ ಮುಖಭಂಗಕ್ಕೆ ಒಳಗಾಗಿದೆ.

ಝಲ್ದಾ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಟಿಎಂಸಿ 5 ವಾರ್ಡ್ ಗೆದ್ದಿದ್ದರೆ, ಕಾಂಗ್ರೆಸ್ 5 ವಾರ್ಡ್ ಗೆದ್ದಿತ್ತು. ಇನ್ನುಳಿದ ಎರಡು ವಾರ್ಡ್ ಪಕ್ಷೇತರರು ಗೆದ್ದಿದ್ದರು. ಪಕ್ಷೇತರರ ಬೆಂಬಲ ಪಡೆದು ಟಿಎಂಸಿ ಝಲ್ದಾ ಮುನ್ಸಿಪಾಲಿಟಿಯಲ್ಲಿ ಅಧಿಕಾರ ಹಿಡಿದಿತ್ತು. ಆದರೆ ಅಕ್ಟೋಬರ್ 13 ರಂದು ಟಿಎಂಸಿ ವಿಶ್ವಾಸ ಕಳೆದುಕೊಂಡಿದೆ ಎಂದು ಕಾಂಗ್ರೆಸ್ ಚೇರ್ಮೆನ್ ಸುರೇಶ್ ಅಗರ್ವಾಲ್ ವಿರುದ್ಧ ಹೋರಾಟ ಆರಂಭಿಸಿದ್ದರು. ಇಷ್ಟೇ ಅಲ್ಲ ವಿಶ್ವಾಸ ಮತ ಯಾಚನೆ ನಡೆಸುವಂತೆ ಆಗ್ರಹಿಸಿದ್ದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *