Breaking News

ವಿಮಾನ ಪತನ : 8 ಜನ ಸಾವು


ಕೊಲಂಬಿಯಾ : ಮೆಡಿಲಿನ್‌ನಲ್ಲಿ ಎಂಟು ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಪತನವಾಗಿದ್ದು, ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ.

ಒಲಯಾ ಹೆರೆಯಾ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ನಂತರ ವಿಮಾನ ಪತನವಾಗಿದೆ. ಕೊಂಬಿಯಾದ ಎರಡನೇ ಅತಿದೊಡ್ಡ ನಗರವಾದ ಮೆಡೆಲಿನ್ ವಸತಿ ಪ್ರದೇಶದಲ್ಲಿ ವಿಮಾನ ಮನೆಯೊಂದಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ ಎಂಟು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇಂಜಿನ್ ವೈಫಲ್ಯದಿಂದ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮನೆಗೆ ವಿಮಾನ ಡಿಕ್ಕಿ ಹೊಡೆದಿದ್ದು, ಮನೆಯಲ್ಲಿ ಯಾರಾದರೂ ಇದ್ದರೇ? ಇದ್ದರೆ ಅವರು ಗಾಯಗೊಂಡಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎನ್ನುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ವಿಮಾನದಲ್ಲಿ ಆರು ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ವಿಮಾನ ನಿಲ್ದಾಣದ ಪಕ್ಕದಲ್ಲೇ ಇದ್ದ ಮನೆಗೆ ಡಿಕ್ಕಿಯಾಗಿದೆ. ಇದರಿಂದಾಗಿ ಏಳು ಮನೆಗಳಿಗೆ ಹಾಗೂ ಆರು ಕಟ್ಟಡಗಳಿಗೆ ಹಾನಿಯಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *