Breaking News

ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ



ಬೆಂಗಳೂರು: ಹವಾಮಾನದಲ್ಲಿ ಪದೇ ಪದೆ ಉಂಟಾಗುತ್ತಿರುವ ಬದಲಾವಣೆಗಳಿಂದ ವಾತಾವರಣದಲ್ಲಿ ಚಳಿ-ಮಳೆ-ಬಿಸಿಲಿನ ಏರಿಳಿತ ಮುಂದುವರಿದಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

ನಗರದಲ್ಲಿ ಎರಡು ವಾರದಿಂದಲೂ ಮಳೆ, ಬೆಳಗ್ಗೆ ಚಳಿ ಜೊತೆಗೆ ಅತ್ಯಧಿಕ ಮಂಜು ಕವಿದ ವಾತಾವರಣ ದಾಖಲಾಗುತ್ತಿದೆ. ಮಧ್ಯಾಹ್ನ ಬಿಸಿಲು ಕಂಡು ಬರುತ್ತಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್ 22 ರಿಂದ ನ.24ರವರೆಗೆ ನಗರದಲ್ಲಿ ಮಳೆ ಬೀಳಲಿದೆ.

ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಮಧ್ಯಾಹ್ನ ಇಲ್ಲವೆ ಸಂಜೆ ನಂತರ ಒಂದೆರಡು ಕಡೆಗಳಲ್ಲಿ ಜಿಟಿ ಜಿಟಿ ಇಲ್ಲವೇ ಹಗುರದಿಂದ ಸಾಧಾರಣವಾಗಿ ಮಳೆ ಬೀಳಲಿದೆ. ಇದೇ ವೇಳೆ ಬಹಳಷ್ಟು ಪ್ರದೇಶಗಳಲ್ಲಿ ತುಂತುರು ಮಳೆ ಸುರಿಯುವ ಮುನ್ಸೂಚನೆ ಇದೆ. ಮಬ್ಬು ವಾತಾವರಣ ಇದ್ದರೂ ಚಳಿ ತುಸು ಕಡಿಮೆ ಆಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *