Breaking News

ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ : ಸಿಎಂ

ಚಿತ್ರದುರ್ಗ : ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದರು.

ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಹಾಗಾಗಿ ಈ ಕುಕ್ಕರ್‌ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ,’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈಗಾಗಲೇ ಕರ್ನಾಟಕ ಪೋಲಿಸ್ 18 ಸ್ಲಿಪರ್ ಸೇಲ್ ಹಿಡಿದು ತಿಹಾರ್ ಜೈಲಿಗೆ ಕಳಿಸಿದ್ದಾರೆ. ಆದರೂ ಕೂಡ ಇದು ನಿರಂತರವಾಗಿ ನಡೆಯುತ್ತಿದೆ ಎಂದರು. ಭಯೋತ್ಪಾದಕರು ಹೊರ ರಾಜ್ಯಗಳ ಸಂಪರ್ಕ ಇಟ್ಟುಕೊಂಡು ರಾಜ್ಯಕ್ಕೆ ನುಸುಳುತಿದ್ದಾರೆ.

ಅಂತಹವರನ್ನು ನಿಯಂತ್ರಣ ಮಾಡಲಾಗಿದೆ. ದೇಶದ ಸುರಕ್ಷತೆ ಇಟ್ಟುಕೊಂಡು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಬಂಧಿಸಿದ ಆರೋಪಿಯ ಬಗ್ಗೆ 24 ಗಂಟೆಯೊಳಗೆ ನಿಜವಾದ ಮಾಹಿತಿ ತಿಳಿದುಬರಲಿದೆ. ಇದರ ಹಿಂದೆ ರಾಷ್ಟ್ರ ಅಥವಾ ಅಂತಾರಾಷ್ಟ್ರೀಯ ಮಟ್ಟದ್ದು ಯಾವುದೇ ಆಗಿದ್ದರೂ ಅದನ್ನು ಭೇದಿಸಲು ಎನ್‌ಐಎ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *