ಬೆಂಗಳೂರು : ಅಕ್ರಮ ವೋಟರ್ ಐಡಿ ಪ್ರಕರಣದ ಕುರಿತು ಕಾಂಗ್ರೆಸ್ ಮುನ್ನವೇ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಮುಂಬರುವ 2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ಚುನಾವಣೆಯ ಸಿದ್ದತೆ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಮಂಗಳವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಫ್ಯಾಕ್ಸ್ ಮೂಲಕ ನಾಲ್ಕು ಪುಟಗಳ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ, ಅಕ್ರಮ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಲೋಕೇಶ್ ನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣದ ಎಫ್ ಐ ಆರ್ ನಲ್ಲಿ ಲೋಕೇಶ್ ಹೆಸರು ಉಲ್ಲೇಖವಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

