Breaking News

5.86 ಲಕ್ಷ ದಿವ್ಯಾಂಗರಿಗೆ ನೀಡುವ ಮೂಲಕ ಕರ್ನಾಟಕ ಅದ್ಭುತ ಸಾಧನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶೇಷ ಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ)ಯನ್ನು ಈವರೆಗೆ 5.86 ಲಕ್ಷ ದಿವ್ಯಾಂಗರಿಗೆ ನೀಡುವ ಮೂಲಕ ಕರ್ನಾಟಕ ಅದ್ಭುತ ಸಾಧನೆ ಮಾಡಿದೆ. ದಿವ್ಯಾಂಗರು ಕೂಡಲೇ ಈ ಕಾರ್ಡಿಗಾಗಿ ಹೆಸರು ನೋಂದಾಯಿಸಿಕೊಳ್ಳಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಂಗಳವಾರ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಯುಡಿಐಡಿ ಕಾರ್ಡ್‌ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಸಚಿವರು, ವಿಕಲಚೇತನರ ಸಬಲೀಕರಣ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ, ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ನೀಡಲಾಗುತ್ತಿದೆ.

ಈ ಪೈಕಿ ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ವಿಶಿಷ್ಟ ಗುರುತಿನ ಕಾರ್ಡ್‌ಗಳು ವಿತರಣೆಯಾಗಿವೆ. ಚಿಕ್ಕಮಗಳೂರು ಎರಡನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ ಎಂದು ಸಚಿವರು ತಿಳಿಸಿದರು. ಇದಕ್ಕೆ ಕಾರಣರಾದ ಈ ಎಲ್ಲ ಜಿಲ್ಲೆಗಳ ಆರೋಗ್ಯಾಧಿಕಾರಿಗಳಿಗೆ ಅಭಿನಂದಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *