Breaking News

ರಸ್ತೆ ಅಪಘಾತ : ಓರ್ವ ಸಾವು, ಏಳು ಮಂದಿ ಗಂಭೀರ ಗಾಯ


ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಹತ್ತು ಜನರನ್ನೊಳಗೊಂಡ ಮಂಡ್ಯ ಜಿಲ್ಲೆಯ ಕುಟುಂಬವೊಂದು ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೆರೊ ವಾಹನವನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ, ಇಳಿದು ಅಂಗಡಿಗೆ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್​ಟಿಸಿ ಬಸ್, ಬೊಲೆರೊ ವಾಹನಕ್ಕೆ ಹಾಗೂ ರಸ್ತೆ ಪಕ್ಕ ನಿಂತಿದ್ದವರಿಗೆ ಡಿಕ್ಕಿ ಹೊಡೆಯಿತು.

ದುರ್ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಚೆನ್ನಸಂದ್ರ ನಿವಾಸಿ ಮಹದೇವ (63) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಮಹಿಳೆಯರು, ಓರ್ವ ಪುರುಷ, ಒಂದು ಮಗು ಸೇರಿ ಒಟ್ಟು ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Share News

About BigTv News

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *