Breaking News

ಸಾಲ ಕೊಡಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮೈಸೂರು : ಜಿಲ್ಲೆ ಹೆಚ್​​.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದ ರೈತ ಲಿಂಗೇಗೌಡ(72) ಎಂಬುವವರು ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ.

4 ಎಕರೆ 13 ಗುಂಟೆ ಜಮೀನು‌ ಹೊಂದಿದ್ದ ರೈತ ಲಿಂಗೇಗೌಡ, ₹2 ಲಕ್ಷ ಸಾಲಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್​ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪಡೆದ ಸಾಲ ತೀರಿಸಿಲ್ಲ ಎಂದು ಬ್ಯಾಂಕ್ ಸಾಲ ನಿರಾಕರಿಸಿತ್ತು. ಇದರಿಂದ ಮನನೊಂದು ಬ್ಯಾಂಕ್​​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ರೈತ ಲಿಂಗೇಗೌಡನನ್ನು ಕೆ.ಆರ್​.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ಅಂತರಸಂತೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *