Breaking News

ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಜನ ಜಾಗೃತಿ ಸಮಾವೇಶ


ಬೆಂಗಳೂರು: ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 11 ಗಂಟೆಗೆ ಪರೇಶ್ ಮೇಸ್ತಾ ಸಾವಿನ ಕುರಿತು ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದೆ.
ಮೇಸ್ತಾ ಸಾವಿನ ಪ್ರಕರಣದ ಸಿಬಿಐ ಬಿ ರಿಪೋರ್ಟ್ ಮುಂದಿಟ್ಟು ಸಮಾವೇಶ ನಡೆಸಲಾಗುವುದು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.

ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಯು.ಟಿ. ಖಾದರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *