Breaking News

ಟಿಕೆಟ್‌ ಆಕಾಂಕ್ಷಿಗಳಿಂದ ಪ್ರಮಾಣ ಮಾಡಿಸಿದ ಸಿಎಂ


ಹರಿಹರ (ದಾವಣಗೆರೆ ಜಿಲ್ಲೆ): ಇಲ್ಲಿ  ನಡೆದ ಬಿಜೆಪಿಯ ಜನ ಸಂಕಲ್ಪ ಯಾತ್ರೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರು ತಮ್ಮ ನಾಯಕರ ಫೋಟೊ ತೋರಿಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರಿಂದ ಸಿಟ್ಟಿಗೆದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹರಿಹರ ಕ್ಷೇತ್ರದ ಮೂವರು ಆಕಾಂಕ್ಷಿಗಳಿಂದ ‘ಒಗ್ಗಟ್ಟು ಪ್ರದರ್ಶಿಸುತ್ತೇವೆ’ ಎಂದು ಪ್ರಮಾಣ ಮಾಡಿಸಿದರು.

ಬಿಜೆಪಿಯ ಮಾಜಿ ಶಾಸಕ ಬಿ.ಪಿ. ಹರೀಶ್‌ ಹಾಗೂ ಮುಖಂಡ ಚಂದ್ರಶೇಖರ ಪೂಜಾರ್‌ ಬೆಂಬಲಿಗರು ಶಕ್ತಿ ಪ್ರದರ್ಶಿಸಲು ಪೈಪೋಟಿಗೆ ಇಳಿದಿದ್ದರಿಂದ ಮುಖ್ಯಮಂತ್ರಿ ವೇದಿಕೆಗೆ ಬರುತ್ತಿದ್ದಂತೆ ಮುಜುಗರಕ್ಕೆ ಒಳಗಾದರು.

ತಕ್ಷಣವೇ ಬಿ.ಪಿ. ಹರೀಶ್‌ ಹಾಗೂ ಚಂದ್ರಶೇಖರ ಪೂಜಾರ್‌ ಜೊತೆಗೆ ಇನ್ನೊಬ್ಬ ಆಕಾಂಕ್ಷಿಯಾಗಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್‌ ಹನಗವಾಡಿ ಅವರನ್ನೂ ತಮ್ಮ ಬಳಿ ಕರೆಸಿಕೊಂಡರು. ‘ಯಾರಿಗೆ ಟಿಕೆಟ್‌ ಕೊಟ್ಟರೂ ಪಕ್ಷವನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ’ ಎಂದು ಮೂವರು ನಾಯಕ‌ರಿಗೂ ಕಾರ್ಯಕರ್ತರ ಎದುರಿಗೇ ಪ್ರಮಾಣ ಮಾಡಿಸಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *