ಅಥಣಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಲಾಟೆ ನಡೆದು, ಕೆಲವು ಕಿಡಿಗೇಡಿಗಳು ನಾಲ್ವರ ಮೇಲೆ ಬ್ಲೇಡ್ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
ಚೇತನ ಹಡಪದ, ಪ್ರಸಾದ ಅಶೋಕ ಸಿಂದೂರೆ ಹಾಗು ವಿಕಾಸ ಸುಭಾಶ ಸುಣಗಾರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಹುಲ ಈರಪ್ಪ ಪಾಟೀಲ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಬೆಳಗಾವಿ ವಿಮ್ಸ್ಗೆ ರವಾನಿಸಲಾಗಿದೆ.
ಪ್ರತಿ ವರ್ಷದಂತೆ ಅದ್ದೂರಿಯಾಗಿ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿತ್ತು. ಕಿಡಿಗೇಡಿಗಳ ಕೃತ್ಯದಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

