Breaking News

ಸಿದ್ದರಾಮಯ್ಯನವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ, ಯತ್ನಾಳ ವ್ಯಂಗ್ಯ

ಧಾರವಾಡ: ರಾಜ್ಯದಲ್ಲಿ 160 ಸಾಮಾನ್ಯ ವಿಧಾನಸಭಾ ಕ್ಷೇತ್ರಗಳಿವೆ. ಸಿದ್ದರಾಮಯ್ಯನವರಿಗೆ ಒಂದೂ ಕ್ಷೇತ್ರ ಸಿಗದಂತಾಗಿದೆ. ಇದರಿಂದ ಅವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ ಮಾಡಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕ್ಷೇತ್ರಕ್ಕಾಗಿ ಓಡಾಡುತ್ತಿದ್ದಾರೆ. ಒಮ್ಮೆ ಕೋಲಾರಕ್ಕೆ ಹೋಗುತ್ತಾರೆ, ಒಮ್ಮೆ ಚಾಮರಾಜನಗರಕ್ಕೆ ಹೋಗುತ್ತಾರೆ. ಸಿದ್ದರಾಮಯ್ಯ ಒಬ್ಬ ಸ್ವಯಂ ಘೋಷಿತ ಸಿಎಂ ಎಂದರು.

ಸಿದ್ದರಾಮಯ್ಯ ಹಾಗೂ ಡಿಕೆಶಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಸಂತೋಷ್ ಲಾಡ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ವಿಚಾರ. ಸಿದ್ದರಾಮಯ್ಯ ಹಾಗೂ ಡಿಕೆಶಿ ಚುನಾವಣೆಯಲ್ಲಿ ಸೋಲಬಹುದು ಎಂಬ ಕಾರಣಕ್ಕೆ ಲಾಡ್ ಹಾಗೆ ಹೇಳಿರಬಹುದು ಎಂದರು.

ಮಂಗಳೂರು ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧದ ತನಿಖೆಯಲ್ಲಿ ಯಾವುದೇ ವೈಫಲ್ಯ ಆಗಿಲ್ಲ. ಈ ಸಂಬಂಧ ತನಿಖೆ ಇನ್ನೂ ನಡೆಯುತ್ತಿದೆ. ಅವರ ಮೇಲೆ ಕ್ರಮ ಆಗುತ್ತದೆ. ಪರೇಶ್ ಮೇಸ್ತಾ ಕೆಸ್ ಇನ್ನೊಮ್ಮೆ ತನಿಖೆ ಮಾಡಿಸುವ ಚಿಂತನೆ ನಡೆದಿದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ ಎಂದರು.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *