Breaking News

ಗಡಿ ವಿವಾದ ಕುರಿತು ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ :ಸಿಎಂ



ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಮುಂದಿನ ವಾರ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಸಭೆ ನಡೆಸಿದ್ದು, ಸುಪ್ರೀಂಕೋರ್ಟ್‌ನಲ್ಲಿ ಗಡಿವಿವಾದ ಪ್ರಕರಣ ಬಗ್ಗೆ ಮಾತುಕತೆ ಮೂಲಕವೂ ವಿವಾದ ಬಗೆಹರಿಸಿಕೊಳ್ಳುವ ಚಿಂತನೆಯಿರುವುದಾಗಿ ತಿಳಿಸಿರುವ ಮಾಹಿತಿ ದೊರೆತಿದೆ. ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ಅವರು ದಾವೆ ಹೂಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡನೆಯ ನಿರ್ಣಯವನ್ನು ಸರ್ವಪಕ್ಷ ಸಭೆ ಹಾಗೂ ಗಡಿ ಪ್ರಾಧಿಕಾರದೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ವಾದ ಮಂಡಿಸಲು ನಿರ್ಧಾರ ಕೈಗೊಂಡಿದೆ ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *