ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯದ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲು ಆದೇಶ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮತ್ತು ಬಲವರ್ಧನೆ ಮಾಡುವ ಉದ್ದೇಶದಿಂದ ಜಿಲ್ಲಾವಾರು ಅಧ್ಯಕ್ಷರ ನೇಮಕ ಹಾಗೂ ಬದಲಾವಣೆ ಕಾರ್ಯದಲ್ಲಿ ಡಿಕೆ ಶಿವಕುಮಾರ್ ನಿರತರಾಗಿದ್ದಾರೆ.
ಇದರ ಭಾಗವಾಗಿಯೇ ಐದು ಜಿಲ್ಲೆಗಳಲ್ಲಿ ನೂತನ ನೇಮಕ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅಧ್ಯಕ್ಷರನ್ನು ಹೊಸದಾಗಿ ನೇಮಕ ಮಾಡಲಾಗಿದೆ. ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚು ಒತ್ತು ಕೊಡುವಂತೆ ಜಿಲ್ಲಾಧ್ಯಕ್ಷರಿಗೆ ಸೂಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

