ಚೆನ್ನೈ: ಭಾರತೀಯ ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ಅವರ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಕಮಲ್ ಅಭಿಮಾನಿಗಳು ಚಿಂತಿತರಾಗಿದ್ದಾರೆ. ಜ್ವರದ ಜೊತೆಗೆ ಉಸಿರಾಟದಲ್ಲಿ ಸ್ವಲ್ಪ ತೊಂದರೆಯೂ ಇತ್ತು ಎಂದು ಹೇಳಲಾಗಿದೆ. ಸದ್ಯ ಅವರು ಚೆನ್ನೈನ ಪೊರೂರು ರಾಮಚಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ನಿನ್ನೆ ಹೈದರಾಬಾದ್ ಗೆ ಹೋಗಿದ್ದ ಕಮಲ್ ಹಾಸನ್ ಅವರು ತಮ್ಮ ಗುರು ಕಲಾತಪಸ್ವಿ ಕೆ ವಿಶ್ವನಾಥ್ ಜೊತೆಗಿದ್ದರು. ತದನಂತರ ನಿನ್ನೆ ರಾತ್ರಿಯೇ ಚೆನ್ನೈಗೆ ಬಂದಿದ್ದರು. ಚನ್ನೈ ತಲುಪಿದ ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು ಎಂದು ಹೇಳಲಾಗಿದೆ. ರಾತ್ರಿ ಸ್ವಲ್ಪ ಜ್ವರ ಕಾಣಿಸಿಕೊಂಡು ಉಸಿರಾಟದ ತೊಂದರೆ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಈಗ ಕಮಲ್ ಹಾಸನ್ ಅವರು ಆರೋಗ್ಯವಾಗಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

