Breaking News

ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆ ಸಾಧ್ಯತೆ


ಬೆಂಗಳೂರು: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆ ಮುಂದುವರಿಯಲಿದ್ದು, ಉಷ್ಣಾಂಶ ಇನ್ನಷ್ಟು ಇಳಿಕೆಯಾಗಲಿದೆ.

ನ.26ರ ವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣದಿಂದ ಹಗುರ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಂಜಿನಿಂದ ಕೂಡಿದ ಹನಿ ಮಳೆಯಾದರೆ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಈ ಮಾದರಿಯ ಚಳಿ-ಗಾಳಿ ಮಿಶ್ರಿತ ಹಗುರ ಮಳೆಯಾಗುತ್ತಿದೆ. ನ.26ರ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆ ಮಂಜು ಮುಸುಕಲಿದ್ದು, ಗರಿಷ್ಠ 23 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *