ಶಿಡ್ಲಘಟ್ಟ : ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೋಲಾರ ಜಿಲ್ಲೆಯ ಮುಳಬಾಗಿಲು ನಿಂದ ಆರಂಭವಾಗಿರುವ ಪಂಚರತ್ನ ಯಾತ್ರೆಯು ನಿನ್ನೆಯ ದಿನ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿಗೆ ಪ್ರವೇಶ ಮಾಡಿತ್ತು.
ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಚಿಂತಾಮಣಿ ತಾಲೂಕಿನ ಪವಿತ್ರ ಯಾತ್ರಾಸ್ಥಳ ಕೈವಾರದಲ್ಲಿ ಪಂಚರತ್ನ ಯಾತ್ರೆಯನ್ನು ಆರಂಭಿಸಿ ಚಿನ್ನಸಂದ್ರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಶಿಡ್ಲಘಟ್ಟ ತಾಲೂಕಿನ ವೈ.ಹುಣಸೇಹಳ್ಳಿ ಮೂಲಕ ಪಂಚರತ್ನ ಯಾತ್ರೆ ಪ್ರವೇಶ ಮಾಡಿದೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಮುಖಂಡರು ರವಿಕುಮಾರ್ ಅವರ ನೇತೃತ್ವದಲ್ಲಿ ಸಹಸ್ರಾರು ಜೆಡಿಎಸ್ ಕಾರ್ಯಕರ್ತರು ಪಂಚರತ್ನ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಪಂಚರತ್ನ ಯಾತ್ರೆಯ ಅಲೆ ಬೀಸುತ್ತಿದೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಭುತವಾಗಿ ಸ್ವಾಗತವನ್ನು ಕೋರಿ ಜನ ಆಶೀರ್ವಾದ ಮಾಡುತ್ತಿದ್ದಾರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ನನ್ನಿಂದ ತಪ್ಪಾಗಿದೆ ಮೇಲೂರು ರವಿಕುಮಾರ್ ಅವರು ನೊಂದಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರು ಅವರಿಗೆ ಆಶೀರ್ವದಿಸಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವನ್ನು ರಚನೆ ಮಾಡಲು ಬೆಂಬಲಿಸಬೇಕೆಂದು ಮನವಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

