Breaking News

ರಾಜ್ಯದಲ್ಲಿ  61  ಕೊರೋನ ಪತ್ತೆ : ಓರ್ವ ಸಾವು


ಬೆಂಗಳೂರು: ರಾಜ್ಯದಲ್ಲಿ ಗುರುವಾರ 61 ಹೊಸ ಕೊರೋನ ಪ್ರಕರಣಗಳು ದೃಢವಾಗಿದೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 53 ಜನ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,70,990ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,261ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,543ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಒಬ್ಬರ ಸಾವು: ಕೋವಿಡ್ ಸೋಂಕಿನಿಂದಾಗಿ ಹಾಸನ ಜಿಲ್ಲೆಯಲ್ಲಿ ಒರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 61 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 1, ಬೆಂಗಳೂರು ನಗರ 38, ಚಾಮರಾಜನಗರ 2, ಚಿತ್ರದುರ್ಗ 3, ದಕ್ಷಿಣಕನ್ನಡ 1, ಧಾರವಾಡ 1, ಹಾಸನ 1, ಕೋಲಾರ 2, ಮಂಡ್ಯ 2, ಮೈಸೂರು 5, ರಾಯಚೂರು 2, ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರಕರಣ ಪತ್ತೆಯಾಗಿವೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *