Breaking News

ಪಿಎಸ್ಐ ಪರೀಕ್ಷೆ ಅಕ್ರಮ ಕುರಿತು ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ

ಧಾರವಾಡ : ಪಿಎಸ್ಐ ಪರೀಕ್ಷೆ ಅಕ್ರಮ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇನ್ನೂ ಪ್ರಕರಣ ಕುರಿತು ಬಗೆದಷ್ಟು ಅಕ್ರಮಗಳು ಹೊರಗೆ ಬರುತ್ತಿವೆ. ಅಕ್ರಮದಿಂದ ಪಿಎಸ್ಐ ಪರೀಕ್ಷೆ ಬರೆದು ಈಗ ಸಿಕ್ಕು ಬಿದ್ದಿದ್ದಾರೆ. ಆದರೆ, ನಿಯತ್ತಿನಿಂದ ಹಗಲು ರಾತ್ರಿ ಸತತ ಪ್ರಯತ್ನ ಪಟ್ಟು ಓದಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.

ಅಕ್ರಮ ಹೊರಬೀಳುತ್ತಿದ್ದಂತೆ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸುವುದಕ್ಕಾಗಿ ಹೇಳಿತ್ತು. ಇದರಿಂದ ಸಕ್ರಮವಾಗಿ ಕಷ್ಟ ಪಟ್ಟು ಓದಿದ ಅಭ್ಯರ್ಥಿಗಳಿಗೆ ಅನ್ಯಾಯವಾದಂತಾಗಿದ್ದು ಅಂದಿನಿಂದ ಆ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಕೂಡ ವ್ಯಕ್ತಪಡಿಸಿದ್ದರು.

ಇದರ ನಡುವೆಯೇ ಈಗ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಪಿಎಸ್ಐ ಪರೀಕ್ಷೆಗೆ ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ಅಭ್ಯರ್ಥಿಗಳು ಧಾರವಾಡ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧಾರವಾಡದ ಶ್ರೀನಗರ ಸರ್ಕಲ್ ನಿಂದ ಬೃಹತ್ ಪಾದಯಾತ್ರೆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಪರೀಕ್ಷೆಯನ್ನ ರದ್ದುಪಡಿಸಿ ಅಕ್ರಮವಾಗಿರೋ ಪರೀಕ್ಷೆಯನ್ನ ಸಂಪೂರ್ಣ ತನಿಖೆಗೆ ಆಗ್ರಹಿಸಿದ ಅಭ್ಯರ್ಥಿಗಳು , ಸಾಲ ಸೋಲ ಮಾಡಿ ನಾವು ಕಷ್ಟಪಟ್ಟು ಓದಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದೇವೆ. ಅಕ್ರಮ ಮಾಡಿದವರಿಗೆ ಮಾತ್ರ ಶಿಕ್ಷೆ ಕೊಡಿ ನಮಗ್ಯಾಕೆ ಈ ಶಿಕ್ಷೆ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಅಭ್ಯರ್ಥಿಗಳು, ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಬೃಹತ್ ಮಟ್ಟದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಜುಬಲಿ ವೃತ್ತಕ್ಕೆ ಹೋಗೋದಾಗಿ ಪ್ರತಿಭಟನಾಕಾರರ ಪಟ್ಟುಹಿಡಿದಿದ್ದರು. ಡಯಟ್ ಕಾಲೇಜು ಎದುರಿಗೆ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಈ ವೇಳೆ ಜುಬಲಿ ವೃತ್ತಕ್ಕೆ ಹೋಗೋದಾಗಿ ಪೊಲೀಸರ ಜೊತೆ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದ್ದು, ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *