Breaking News

ಸಾಲದ ಬಾಧೆ ತಾಳಲಾರದೆ  ರೈತ ಆತ್ಮಹತ್ಯೆ


ಹಗರಿಬೊಮ್ಮನಹಳ್ಳಿ : ತಾಲೂಕಿನ ಬೆಣಕಲ್ ಗ್ರಾಮದ ಬಿ.ಆರ್. ಕೊಟ್ರಗೌಡ ಮೃತ ಶಿಕ್ಷಕ. ಸಾಲದ ಬಾಧೆ ತಾಳಲಾರದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ ನೋಟ್‌ ಬರೆದಿಟ್ಟಿದ್ದಾರೆ.

ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ತಾಂಡದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಅವರು ಪಟ್ಟಣದ ಹೊರವಲಯದ ಕೆಚ್ಚಿನಬಂಡಿ ರಸ್ತೆಯ ಬದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಕೆಳಗೆ, ಮೇ 31ರಂದು ಅವರು ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರು. ನಿವೃತ್ತಿ ಬಳಿಕ ಪಟ್ಟಣದ ರಾಮನಗರದಲ್ಲಿ ವಾಸವಾಗಿದ್ದರು. ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ʼಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ, ನನ್ನ ಸಂಸಾರ ಭಗವಂತ ಕಾಪಾಡಲಿʼ ಎಂದು ಬರೆದಿಟ್ಟಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *