ಶಿವಮೊಗ್ಗ: ರಾಜ್ಯದಲ್ಲಿ ಗೋವುಗಳ ರಕ್ಷಣೆಗಾಗಿ ಈಗಾಗಲೇ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ. ಇದರಿಂದ 100 ಸರ್ಕಾರಿ ಗೋಶಾಲೆಗಳನ್ನು ಆರಂಭಿಸಲು ತಯಾರಿ ನಡೆದಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಮೇಲೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅದರಂತೆ ಇದೀಗ ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಎನ್ನುವ ಉದ್ದೇಶದಿಂದ ‘ಪುಣ್ಯದತ್ತು’ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈಗಾಗಲೇ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. ಈ ಗೋವುಗಳ ರಕ್ಷಣೆಗಾಗಿ 100 ಸರ್ಕಾರಿ ಗೋಶಾಲೆ ಆರಂಭಿಸುವುದಾಗಿ ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ. ಹಾಗಾಗಿ ಡಿಸೆಂಬರ್ ತಿಂಗಳೊಳಗೆ 30 ಗೋಶಾಲೆ ಆರಂಭಿಸುತ್ತೇವೆ ಎಂದು ಪ್ರಭು ಚೌಹಾಣ್ ಹೇಳಿದ್ದಾರೆ.
ಗೋವುಗಳ ರಕ್ಷಣೆಗಗಾಗಿಯೇ ರಾಜ್ಯದಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಈಗಾಗಲೇ ಬೆಂಗಳೂರು, ಬೆಳಗಾವಿ ವಿಭಾಗದಲ್ಲಿ ಈ ಸಹಾಯವಾಣಿಗೆ ಚಾಲನೆ ನೀಡಲಾಗಿದೆ. ಎಲ್ಲಾ ಜಿಲ್ಲೆಗಳಿಗೂ ಸಹಾಯವಾಣಿ ಹಾಗೂ ಆಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಜಾನುವಾರು ಚರ್ಮಗಂಟು ರೋಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ. ಲಸಿಕೆಗಾಗಿ ಸರ್ಕಾರದಿಂದ 13 ಕೋಟಿ ಬಿಡುಗಡೆ ಮಾಡಲಾಗಿದೆ. ಚರ್ಮಗಂಟು ರೋಗದಿಂದ ಶೇ. 50ರಷ್ಟು ಗೋವುಗಳು ಗುಣಮುಖವಾಗಿವೆ. ಇನ್ನು 400 ಪಶು ವೈದ್ಯರ ನೇಮಕಾತಿಗೆ ಆದೇಶ ಕೂಎ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

