Breaking News

ದ್ವಾರಕೀಶ್ ಅವರಿಗೆ ಗೌರವ ಡಾಕ್ಟರೇಟ್​​ ಘೋಷಣೆ


ಬೆಂಗಳೂರು: ನಟ, ನಿರ್ದೇಶಕ ಮತ್ತು ನಿರ್ಮಾಪಕ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್​​ ಘೋಷಣೆ ಮಾಡಿದೆ.

ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಶೈಲಿಯಲ್ಲಿ ಕೊಡುಗೆ ನೀಡುತ್ತ ಬಂದಿರುವ. ಜೊತೆಗೆ ಚಿತ್ರರಂಗದ ಹಲವರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಹಿರಿಯ ನಟ ದ್ವಾರಕೀಶ್ ಅವರು ಮೂಲತಃ ಮೈಸೂರಿನವರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಮಾಡಿದ್ದು, ನಂತರ ಅವರ ಸೋದರನ ಜೊತೆ ಸೇರಿ ‘ಭಾರತ್ ಆಟೋ ಸ್ಪೇರ್ ಸ್ಟೋರ್’ ಶುರುಮಾಡುತ್ತಾರೆ. ಆದರೆ ನಟನೆ ಇವರನ್ನು ಕೈಬೀಸಿ ಕರೆಯುತ್ತದೆ. ಹಾಗಾಗಿ 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯನ್ನು ಆಯ್ದುಕೊಳ್ಳುತ್ತಾರೆ. ಹಲವು ಅವಕಾಶಗಳು ಕೈತಪ್ಪಿ ಹೋದ ಬಳಿಕ 1964ರಲ್ಲಿ ತೆರೆಕಂಡ ‘ವೀರಸಂಕಲ್ಪ’ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಾರೆ. ಅಲ್ಲಿಂದ ಕನ್ನಡ , ಹಿಂದಿ ಹಲವಾರು ಚಿತ್ರಗಳನ್ನು ನಿರ್ಮಿಸಿದವರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *