Breaking News

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಬಾಲಕಿ ಗರ್ಭವತಿ: ಪೋಕ್ಸೋ ಕೇಸ್ ದಾಖಲು

ಹುಬ್ಬಳ್ಳಿ : 14 ವರ್ಷದ ಬಾಲಕಿ ಜೊತೆ ದೈಹಿಕ ಸಂಪರ್ಕ ನಡೆಸಿ , ಅವಳು ಗರ್ಭಧರಿಸಲು ಕಾರಣನಾದ 20 ವರ್ಷದ ಯುವಕನ ವಿರುದ್ಧ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ .

ಕಳೆದ ಹದಿನೈದು ದಿನಗಳಿಂದ ಬಾಲಕಿ ವಾಂತಿ ಮಾಡಿಕೊಳ್ಳುತ್ತಿದ್ದು , ಬಾಲಕಿಯ ತಾಯಿ ಚಿಕಿತ್ಸೆಗೆಂದು ಕಿಮ್ಸ್‌ಗೆ ಕರೆದುಕೊಂಡು ಹೋಗಿದ್ದರು . ಬಾಲಕಿಯನ್ನು ತಪಾಸಣೆ ಮಾಡಿದಾಗ ಗರ್ಭಿಣಿ ಎಂಬುದು ಗೊತ್ತಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ತನ್ನ ಅಣ್ಣನ ಮಗನೇ ಆಗಾಗ ಬರುತ್ತಿದ್ದ .ಯಾರೂ ಇಲ್ಲದಾಗ ಆತ ನನ್ನ ಮಗಳನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ . ಆರೋಪಿ ತಲೆ ಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ . ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *