Breaking News

ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ


ಬೆಂಗಳೂರು : ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆ ಹೆಚ್ಚಾಗಲಿದೆ.

ಇಂದು (ಭಾನುವಾರ) ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *