Breaking News

ಭಾರತ್ ಜೋಡೋ ಯಾತ್ರೆ : ನೆಲಕ್ಕೆ ಕುಸಿದ್ದ ಬಿದ್ದ ಹಿರಿಯ ಕಾಂಗ್ರೆಸ್ ನಾಯಕ


ಖಾರ್ಗೋನ್: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯ ಬರ್ವಾಹಾ ಬಳಿ ಶನಿವಾರ ನೆಲಕ್ಕೆ ಬಿದ್ದ ಘಟನೆ ನಡೆದಿದ್ದು, ರಸ್ತೆಯ ದುಸ್ಥಿತಿ ವಿರೋಧ ಪಕ್ಷ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ ಯಾತ್ರೆಯ ನಡುವೆ ಚಹಾ ವಿರಾಮದ ವೇಳೆ ರಸ್ತೆಬದಿಯ ರೆಸ್ಟೋರೆಂಟ್ಗೆ ಹೋಗುತ್ತಿದ್ದಾಗ ಸಿಂಗ್ ಕುಸಿದು ಬಿದ್ದಿರು.

ತಕ್ಷಣವೇ ಅವರನ್ನು ಸುತ್ತುವರೆದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಸಹಾಯ ಮಾಡಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯ ವೇಳೆ ದಿಗ್ವಿಜಯ ಸಿಂಗ್ ಇದುವರೆಗೆ ನಾಲ್ಕು ಬಾರಿ ನೆಲಕ್ಕೆ ಬಿದ್ದಿದ್ದಾರೆ. ಆದರೆ, ಅವರು ಮಧ್ಯ ಪ್ರದೇಶದಲ್ಲಿ ಮೊದಲ ಬಾರಿಗೆ ಬಿದ್ದಿದ್ದು, ಇದಕ್ಕೆ ಹದಗೆಟ್ಟ ರಸ್ತೆಗಳೆ ಕಾರಣ” ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಉಸ್ತುವಾರಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *