Breaking News


ಡಿ.24 ರಿಂದ 26ರವರೆಗೆ ದಾವಣಗೆರೆಯಲ್ಲಿ ಮಹಾ ಅಧಿವೇಶನ


ಚಾಮರಾಜನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ಡಿ.24 ರಿಂದ 26ರವರೆಗೆ ದಾವಣಗೆರೆಯಲ್ಲಿ ನಡೆಯಲಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕ ಪ್ರಸನ್ನ, ‘ಮೂರು ದಿನಗಳ ಕಾಲ ನಡೆಯುವ ಅಧಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.

‘ಮಹಾ ಅಧಿವೇಶನದಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಹಾಗೂ ವಸ್ತು ಪ್ರದರ್ಶನಗಳು ನಡೆಯಲಿದೆ. ಕೃಷಿ, ವಾಣಿಜ್ಯ, ಕೈಗಾರಿಕೆ, ಮಹಿಳಾ ಮತ್ತು ಯುವ, ಆರೋಗ್ಯ, ನೌಕರರ ಅಧಿವೇಶನ ನಡೆಯಲಿದೆ. ಸಮಾಜಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳು, ಮುಂದಿನ ಐದು ವರ್ಷಗಳಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದು ಹೇಳಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *