Breaking News

ಪ್ರಮೋದ್‌ ಮಧ್ವರಾಜ್‌ ಅವರಿಗೆ ಪಕ್ಷ ಟಿಕೆಟ್‌ ನೀಡಿದರೆ ನಾನು ಅವರ ಪರವಾಗಿ ಪ್ರಚಾರ ಮಾಡಲಿದ್ದೇನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಂಬಂಧಿಸಿದಂತೆ ಪಕ್ಷ ಸಂಘಟನೆಯ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳು ಆರಂಭಿಸಿದ್ದೇವೆ. ಟಿಕೆಟ್‌ ನೀಡುವುದು ಪಕ್ಷದ ತೀರ್ಮಾನ. ಪಕ್ಷ ನನಗೆ ಟಿಕೆಟ್‌ ನೀಡಿದರೆ ಪ್ರಮೋದ್‌ ಮಧ್ವರಾಜ್‌ ಅವರು ನನ್ನ ಪರವಾಗಿ ಚುನಾವಣ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ಪ್ರಮೋದ್‌ ಮಧ್ವರಾಜ್‌ ಅವರಿಗೆ ಪಕ್ಷ ಟಿಕೆಟ್‌ ನೀಡಿದರೆ ನಾನು ಅವರ ಪರವಾಗಿ ಪ್ರಚಾರ ಮಾಡಲಿದ್ದೇನೆ ಅಎಂದು ಶಾಸಕ ಕೆ.ರಘುಪತಿ ಭಟ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿಯಲ್ಲಿ ಸಂಘಟನೆ ಹಾಗೂ ಚುನಾವಣೆಗೆ ಟಿಕೆಟ್‌ ಹಂಚಿಕೆ ಸಂಬಂಧ ವ್ಯವಸ್ಥಿತವಾದ ಪದ್ಧತಿಯಿದೆ. ಅದರಂತೆ ನಡೆಯಲಿದೆ. ಈವರೆಗೂ ಯಾರಿಗೂ ಮುಂಬರುವ ವಿಧಾನಸಭೆಯ ಟಿಕೆಟ್‌ ಘೋಷಣೆಯಾಗಿಲ್ಲ. ಆದರೆ, ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಬೇಕಾದ ಪ್ರಚಾರ, ಪ್ರಯತ್ನ ಈಗಾಗಲೇ ಆರಂಭಿಸಿದ್ದೇವೆ. ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯವೂ ಅಷ್ಟೇ ವೇಗವಾಗಿ ನಡೆಯುತ್ತಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ನಿಂತರು ಜಯ ಸಾಧಿಸಬೇಕು ಎಂದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *