Breaking News


ಸರಣಿ ಅಪಘಾತ:  6 ಮಂದಿಗೆ ಗಾಯ


ಬೆಳಗಾವಿ: ತಾಲ್ಲೂಕಿನ ಹೊಸವಂಟಮುರಿ ಘಾಟ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ.

‘ಬೆಳಗಾವಿಯಿಂದ ಸಂಕೇಶ್ವರ ಕಡೆ ಹೋಗುತ್ತಿದ್ದ ಎರಡು ಲಾರಿ, ಎರಡು ಕಾರು ಮತ್ತು ಒಂದು ಟಂಟಂ ವಾಹನದ ಮಧ್ಯೆ ಅಪಘಾತವಾಗಿದೆ. ಗಾಯಗೊಂಡ 6 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಕಾಕತಿ ಠಾಣೆ ಪಿಎಸ್‌ಐ ಮಂಜುನಾಥ ಹುಲಕುಂದ  ತಿಳಿಸಿದರು.

ಈ ಅಪಘಾತದಿಂದಾಗಿ ಹೆದ್ದಾರಿ ಮೇಲೆ 2 ಕಿ.ಮೀ.ವರೆಗೆ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು. ವಾಹನಗಳ ಚಾಲಕರು ಹೈರಾಣಾದರು.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *