Breaking News

ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ ಬಿಜೆಪಿಗೆ ಸೇರ್ಪಡೆ

ಬೆಂಗಳೂರು-ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರದ ಗದ್ದುಗೆ ಹಿಡಿಯಲು ರಣತಂತ್ರ ರೂಪಿಸಿರುವ ಬಿಜೆಪಿ, ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಅಂಬರೀಶ್ ಅವರ ಬಲಗೈ ಬಂಟ ಎಂದು ಗುರುತಿಸಿಕೊಂಡಿದ್ದ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಸಚಿವರಾದ ನಾರಾಯಣ ಗೌಡ, ಕೆ.ಗೋಪಾಲಯ್ಯ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾನ, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸಚ್ಚಿದಾನಂದ ಮೂರ್ತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ ಅವರು, ಮಂಡ್ಯ ಜಿಲ್ಲೆಯಲ್ಲಿ ನಾವು ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ತಲೆಕೆಡಿಸಿಕೊಳ್ಳಬೇಡಿ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಮ್ಮ ಸರ್ಕಾರವೇ ಇದೆ ಎಂದು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *