ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,72,068ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,615ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 355 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,36,471ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 2,66,442 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,58,68,872 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

