ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಪ್ರಕರಣ ಇದೇ 30 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ನ್ಯಾಯಾಲಯದಲ್ಲಿ ರಾಜ್ಯದ ನಿಲು ವನ್ನು ಪ್ರತಿಪಾದಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮುಕುಲ್ ರೋಹಟಗಿ ಜತೆ ಮಂಗಳವಾರ ಚರ್ಚೆ ನಡೆಸಲಿದ್ದಾರೆ.
ಸಭೆಯ ಬಳಿಕ ಬೊಮ್ಮಾಯಿ ಅವರು ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಮತ್ತು ಒಂದಿಬ್ಬರು ಕೇಂದ್ರ ಸಚಿವರನ್ನೂ ಭೇಟಿ ಮಾಡಲಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಗೂ ಸಮಯ ಕೇಳಿದ್ದು, ಇನ್ನೂ ಸಮಯ ಕೊಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

