Breaking News


ಕುಮಾರಸ್ವಾಮಿ ಅಸ್ಪೃಶ್ಯರ ಪದ ಬಳಕೆ : ದಲಿತ ಸಂಘಟನೆಯಿಂದ ದೂರು


ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ ಸಮಯದಲ್ಲಿ ಸಿ ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಸಂವಿಧಾನ ವಿರೋಧಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆಸಿದ ಮಾಧ್ಯಮಗೋಷ್ಟಿಯಲ್ಲಿ ಛಲವಾಧಿ ಮಹಾಸಭಾದ ದಲಿತ ಮುಖಂಡ ಲಕ್ಷ್ಮೀಪತಿ ಈ ಕುರಿತು ಮಾತನಾಡಿ, ನ. 27ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ವೇಳೆ ಖಾಸಗಿ ವಾಹಿನಿಗೆ ಕುಮಾರಸ್ವಾಮಿ ಚುಟುಕು ಸಂದರ್ಶನ ನೀಡಿದ್ದರು. ಈ ವೇಳೆ ಪತ್ರಕರ್ತರು ಜೆಡಿಎಸ್ ನಾಯಕ ಇಬ್ರಾಹಿಂ ಅವರು ಮುಖ್ಯಮಂತ್ರಿ ಆಗುವರೇ ಎಂಬ ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಉತ್ತರ ನೀಡುವ ಸಮಯದಲ್ಲಿ ಹೆಚ್​ಡಿಕೆ ಅವರು ಸಿ ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಪದ ಬಳಕೆ ಮಾಡಿದ್ದರು. ಇದು ಕಾನೂನು ವಿರೋಧಿಯಾಗಿದೆ ಎಂದು ಆರೋಪಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *