Breaking News

ಖ್ಯಾತ ಯಕ್ಷಗಾನ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ

ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಬುಧವಾರ ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.

1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018-2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ. ಸುಂದರ್‌ ರಾವ್‌ ಅವರು, ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ.

ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿದೆ. ಸುಂದರ್‌ ರಾವ್‌ ಅವರ ಅಗಲುವಿಕೆಗೆ ಯಕ್ಷಗಾನ ಕಲಾರಂಗದ ಇಡೀ ತಂಡ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *