Breaking News


ಹಸೆಮಣೆ ಏರಲು ಸಜ್ಜಾದ ಅಭಿಷೇಕ್ ಅಂಬರೀಷ್


ಬೆಂಗಳೂರು: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ.

ಡಿಸೆಂಬರ್ 2ನೇ ವಾರದಲ್ಲಿ ಅಭಿಷೇಕ್ ಅವರ ನಿಶ್ಚಿತಾರ್ಥ ಖ್ಯಾತ ಮಾಡೆಲ್ ಒಬ್ಬರ ಜೊತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅಭಿಷೇಕ್ ಅಂಬರೀಷ್ ಅವರ ಮದುವೆ ಅದಾಗಲೇ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಸಮಾರಂಭ ಡಿಸೆಂಬರ್ ಎರಡನೇ ವಾರದಲ್ಲಿ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಪುತ್ರಿ, ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಭಿಷೇಕ್ ಅಂಬರೀಶ್ ಕೈ ಹಿಡಿಯುತ್ತಿರುವ ಹುಡುಗಿ ಅವಿವಾ ಬಿದ್ದಪ್ಪ ಖ್ಯಾತ ಮಾಡೆಲ್ ಎಂದು ಹೇಳಲಾಗುತ್ತಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *