Breaking News

ಬಸ್​ ಮತ್ತು ಟ್ರಕ್​ ನಡುವೆ ಅಪಘಾತ : 6 ಜನ ಸಾವು


ಬಹ್ರೇಚ್​ (ಉತ್ತರ ಪ್ರದೇಶ): ಬಸ್​ ಮತ್ತು ಟ್ರಕ್​ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್​ನ ತಪ್ಪೆ ಸಿಪಾಹ್​ನಲ್ಲಿ ನಡೆದಿದೆ.

ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಟ್ರಕ್​ ಡ್ರೈವರ್​ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್​ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟರ್​ ದಿನೇಶ್​ ಚಂದ್ರ ತಿಳಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *